Kannada Note|工具線上App不用買

シェア記事:

【免費工具App】Kannada Note-APP點子

ಜಾಗತೀಕರಣದ ಈ ಪರ್ವಕಾಲದಲ್ಲಿ ಭಾರತದ ಎಲ್ಲ ದೇಶ ಭಾಷೆಗಳೂ ತುಂಬ ಅಪಾಯಕರ ಪರಿಸ್ಥಿತಿಯಲ್ಲಿವೆ ಎಂಬುದನ್ನು ನಿಸ್ಸಂಶಯವಾಗಿ ಒಪ್ಪಬಹುದು.ಇದಕ್ಕೆ ಮುಖ್ಯ ಕಾರಣ ಮನುಷ್ಯ ಸಮಾಜದ ಎಲ್ಲ ವಹಿವಾಟುಗಳೂ ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಬದಲಾಗುತ್ತಿರುವುದು. ಕಂಪ್ಯೂಟರ್, ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ಸರ್ವವ್ಯಾಪಿಯಾಗಿ ಅವರಿಸಿರುವುದು. ನಾವು ಕಂಪ್ಯೂಟರಿನಲ್ಲಿ ಇಂಗ್ಲೀಷ್ ಭಾಷೆಯಷ್ಟೇ ಸರ್ವಸಮರ್ಥವಾಗಿ ನಮ್ಮ ಭಾಷೆಯನ್ನೂ ಬಳಸಲು ಸಾಧ್ಯವಾಗದಿದ್ದರೆ ನಮ್ಮ ಭಾಷೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಕಂಪ್ಯೂಟರೇನು ಕನ್ನಡಕ್ಕೆ ಹೊಸದಲ್ಲ. ನಮ್ಮ ತಂತ್ರಜ್ಞರು ಬಹಳ ಹಿಂದೆಯೇ ಕನ್ನಡ ಭಾಷೆಯನ್ನು ಕಂಪ್ಯೂಟರಿಗೆ ಅಳವಡಿಸಿದ್ದರು. ಮುದ್ರಣ, ಪುಸ್ತಕ ಪ್ರಕಾಶನ, ಕಚೇರಿಯ ವಹಿವಾಟುಗಳಲ್ಲಿ, ಟೈಪ್ರೈಟರ್ ಯಂತ್ರಕ್ಕಿಂತ ಹೆಚ್ಚು ವ್ಯಾಪಕವಾಗಿ, ಸಮರ್ಪಕವಾಗಿ ಕನ್ನಡವನ್ನು ಕಂಪ್ಯೂಟರಿನಲ್ಲಿ ಬಳಸಲು ಸಾಧ್ಯವಿತ್ತು. ಆದರೆ ಕನ್ನಡ ತಂತ್ರಾಂಶ ಕ್ಷೇತ್ರ, ವಿಪರೀತ ಅಸ್ತವ್ಯಸ್ತ ಪರಿಸ್ಥಿತಿಯನ್ನು ಎದುರಿಸುತ್ತಿತ್ತು. ಕನ್ನಡಕ್ಕೆ ಬಳಸುವ ಕೀಲಿಮಣೆ ವಿನ್ಯಾಸದಲ್ಲಿ ಏಕರೂಪತೆ ಇರಲಿಲ್ಲ. ಅಷ್ಟೆ ಅಲ್ಲದೆ ಕನ್ನಡ ಅಕ್ಷರಗಳ ಎನ್ಕೋಡಿಂಗ್ ಸಹ ಒಬ್ಬೊಬ್ಬರದು ಒಂದೊಂದು ರೀತಿ ಇತ್ತು. ಒಬ್ಬರ ತಂತ್ರಾಂಶದಲ್ಲಿ ರೂಪಿಸಿದ ಫೈಲ್ ಗಳನ್ನು ಇನ್ನೊಬ್ಬರ ಕಂಪ್ಯೂಟರಿಗೆ ಹಾಕಿ ತೆರೆಯುವಂತಿರಲಿಲ್ಲ. ಕೀಲಿಮಣೆ ವಿನ್ಯಾಸ ಸಹ ಬದಲಾಗುತ್ತಿದ್ದುದರಿಂದ, ಒಂದು ತಂತ್ರಾಂಶದಲ್ಲಿ ಕೆಲಸ ಮಾಡಿದವನು ಇನ್ನೊಂದರಲ್ಲಿ ಮಾಡುವಂತಿರಲಿಲ್ಲ. ದಿನಗಳೆದಂತೆ ಕನ್ನಡ ತಂತ್ರಾಂಶ ಕ್ಷೇತ್ರ ಅವ್ಯವಸ್ಥೆಯ ಆಗರವಾಗತೊಡಗಿತು. ಇಂಟರ್ನೆಟ್ ಆಗಮನದೊಂದಿಗೆ ಐಟಿ ಕ್ಷೇತ್ರ ಅಡೆತಡೆ ಇಲ್ಲದ ವೇಗದಲ್ಲಿ ವೈದ್ಯಕೀಯ ಕ್ಷೇತ್ರದಿಂದ ಹಿಡಿದು ವ್ಯಾಪಾರ ವಹಿವಾಟಿನವರೆಗೆ ತ್ರಿವಿಕ್ರಮ ಸದೃಶವಾಗಿ ಆಕ್ರಮಿಸುತ್ತಿದೆ. ಇ-ಮೇಲ್, ಇ-ವಾಣಿಜ್ಯ, ಇ-ಆಡಳಿತ ಇತ್ಯಾದಿಗಳನ್ನು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಹಸ್ತಾಂತರಿಸಲಾಗುತ್ತಿದೆ. ವಾಣಿಜ್ಯ ಮತ್ತು ಆಡಳಿತವೇ ನಮ್ಮ ದೈನಂದಿನ ವ್ಯವಹಾರಗಳ ಮುಕ್ಕಾಲು ಅಂಶವಾಗಿರುವುದಿಂದ, ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಕನ್ನಡವನ್ನು ಸಮರ್ಥವಾಗಿ ಬಳಸಲು ಕನ್ನಡ ಯೂನಿಕೋಡ್‌ ಬಹಳ ಮುಖ್ಯವಾಗಿತ್ತು. ಇದರ ಪ್ರಾಮುಖ್ಯತೆಯನ್ನು ತಿಳಿದಿದ್ದ ವಿಶ್ರಾಂತ ಕುಲಪತಿಗಳಾದ ಡಾ. ಕೆ.ಚಿದಾನಂದಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಕನ್ನಡದ ಕನಸನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನನಸಾಗಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ತಂತ್ರಾಂಶಗಳು "ವಿಂಡೋಸ್ ಎಕ್ಸ್ ಪಿ" ಯಿಂದ ಮೇಲ್ಪಟ್ಟ ಎಲ್ಲ ಆವೃತ್ತಿಗಳಲ್ಲೂ ಸಮರ್ಪಕವಾಗಿ ಕೆಲಸ ಮಾಡುತ್ತದೆ. ಇದರಿಂದ ಆಗುವ ದೊಡ್ಡ ಅನುಕೂಲವೆಂದರೆ ಇವರು ಕೊಟ್ಟಿರುವ ಪರಿವರ್ತಕಗಳನ್ನು ಉಪಯೋಗಿಸಿ ಬೇರೆ ಬೇರೆ ತಂತ್ರಾಂಶಗಳಲ್ಲಿ ಮಾಡಿರುವ ಸವಾಲುಗಳನ್ನು ಅಥವಾ ಕಡತಗಳನ್ನು ಈ ತಂತ್ರಾಂಶಕ್ಕೆ ಆಮದು ಮಾಡಿಕೊಂಡರೆ ಸಾಕು, ಅನಂತರ "ವಿಂಡೋಸ್ ಎಕ್ಸ್ ಪಿ" ಯಿಂದ ಮೇಲ್ಪಟ್ಟ ಯಾವ ಆವೃತ್ತಿಯಲ್ಲಿ ಬೇಕಾದರೂ ನಾವು ಕೆಲಸ ಮಾಡಬಹುದು.

ಅದೇ ರೀತಿ ದೃಷ್ಟಿ ಇಲ್ಲದೇ ಇರುವವರ ಬಳಕೆಗಾಗಿ ಬ್ರೈಲ್‌ ಕನ್ನಡ ತಂತ್ರಾಂಶ 12 ಬಗೆಯ ಅಕ್ಷರ ವಿನ್ಯಾಸ ಕ್ಷೇಮ ನಾಮಾಂಕಿತದ ಕೀಲಿಮಣೆ ವಿನ್ಯಾಸ ಹಾಗು ಇತ್ತೀಚಿನ ಜಾಗತಿಕರಣದಲ್ಲಿ ಅತಿ ಮುಂಚುಣಿಯಲ್ಲಿ ಇರುವ ಆಂಡ್ರಾಯ್ಡ್‌ ಮೊಬೈಲ್‌ ಈ ಆಂಡ್ರಾಯ್ಡ್‌ ಮೊಬೈಲ್‌‌ನಲ್ಲಿ ಕನ್ನಡವನ್ನು ಬಳಸುವ ಸಲುವಾಗಿ ಕಾನ್‌‌ಕೀ ಮತ್ತು ಕಾನ್‌ ನೋಟ್‌ ಎಂಬ ಎರಡು ಮೊಬೈಲ್‌ ಆಪ್‌ಗಳನ್ನೂ ಸಹ ಸಿದ್ಧಪಡಿಸಲಾಗಿದ್ದು, ಇವುಗಳ ಬಳಕೆಯಿಂದ ಮೊಬೈಲ್‌ ದೂರವಾಣಿಯಲ್ಲಿ ಶೇಖರಿಸುವ ಕಡತಗಳೆಲ್ಲವನ್ನೂ ಸಹ ಕನ್ನಡಲ್ಲಿಯೇ ಶೇಖರಿಸಿ ಪತ್ರ ವ್ಯವಹಾರ ಮತ್ತು ಸಂದೇಶಗಳೆಲ್ಲವನ್ನೂ ಸಹ ಕನ್ನಡದಲ್ಲಿಯೇ ವ್ಯವಹರಿಸಬಹುದು.

【免費工具App】Kannada Note-APP點子

【免費工具App】Kannada Note-APP點子

【免費工具App】Kannada Note-APP點子

【免費工具App】Kannada Note-APP點子

【免費工具App】Kannada Note-APP點子

免費玩Kannada Note APP玩免費

免費玩Kannada Note App

Kannada Note APP LOGO

Kannada Note LOGO-APP點子

Kannada Note APP QRCode

Kannada Note QRCode-APP點子
熱門國家系統支援版本費用APP評分上架日期更新日期
未知Android
Google Play
0.0.1
App下載
免費
1970-01-012015-04-19
シェア記事: